ಪೌರಾಯುಕ್ತೆಯನ್ನು ನಿಂದಿಸಿದ ಕಾಂಗ್ರೆಸ್‌ ಮುಖಂಡನ ವಿರುದ್ಧ ಎರಡು ಎಫ್‌ಐಆರ್‌

ಬಿಜೆಪಿ-ಜೆಡಿಎಸ್‌ ಕೈಗೆ ಕಾಂಗ್ರೆಸ್‌ ಟೀಕಿಸಲು ಸಿಕ್ಕಿದ ಹೊಸ ಅಸ್ತ್ರ

ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತೆ ಅಮೃತ ಗೌಡ ಹಾಗೂ ಜೆಡಿಎಸ್ ಶಾಸಕರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಈಗ ಎರಡೆರಡು ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದು, ಬಂಧನದ ಭೀತಿಯಿಂದಾಗಿ ತಲೆಮರೆಸಿಕೊಂಡಿದ್ದಾರೆ. ಜನಪ್ರತಿನಿಧಿ ಅಲ್ಲದಿದ್ದರೂ ಆಡಳಿತದಲ್ಲಿ ಹಸ್ತಕ್ಷೇಪದ ಆರೋಪವೂ ಅವರ ವಿರುದ್ಧ ಕೇಳಿಬಂದಿದೆ.

ಈ ಪ್ರಕರಣ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾಂಗ್ರೆಸ್‌ ಮೇಲೆ ದಾಳಿ ಮಾಡಲು ಬಿಜೆಪಿಗೆ ಮತ್ತೊಂದು ಪ್ರಬಲ ಅಸ್ತ್ರವಾಗಿ ಸಿಕ್ಕಿದೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್‌ ಕಾಂಗ್ರೆಸ್ದ್‌ ಮೇಲೆ ಮುಗಿಬಿದ್ದಿದ್ದು, ಇದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಇನ್ನೊಂದು ಮುಖ ಎಂದು ಟೀಕಿಸಿವೆ. ರಾಜೀವ್‌ ಗೌಡ ಬಂಧನಕ್ಕೆ ಸರ್ಕಾರದ ಮೇಲೆ ವಿಪಕ್ಷಗಳು ಒತ್ತಡ ಹಾಕಿವೆ. ರಾಜೀವ್‌ ಗೌಡ ಬಹಿರಂಗವಾಗಿ ಕೆಮೆ ಯಾಚಸಿಸದರೂ ಪ್ರಕರಣ ತಣ್ಣಗಾಗಿಲ್ಲ.





















































 
 

ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಜೆಡಿಎಸ್ ಮುಖಂಡರು ಕೂಡ ದೂರು ನೀಡಿದ್ದಾರೆ. ಸ್ಥಳೀಯ ಜೆಡಿಎಸ್ ಶಾಸಕ ಬಿಎಂ ರವಿಕುಮಾರ್ ವಿರುದ್ಧವೂ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಜೆಡಿಎಸ್ ವತಿಯಿಂದ ದೂರು ನೀಡಲಾಗಿದೆ. ಇವುಗಳನ್ನು ಆಧರಿಸಿ ಸದ್ಯ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದರು. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ರಾಜೀವ್ ಗೌಡರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ವಿಪಕ್ಷಗಳು, ಪುರಸಭೆ ನೌಕರರು, ಸಿಬ್ಬಂದಿ ಹಾಗೂ ಸಾರ್ವಜನಿಕರಿಂದ ತೀವ್ರ ಆಗ್ರಹ ವ್ಯಕ್ತವಾಗಿದೆ.

ರಾಜೀವ್ ಗೌಡ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರು ಇದ್ದಾರೆ. ಹೀಗಾಗಿ ದರ್ಬಾರ್ ನಡೆಸಲು ರಾಜೀವ್ ಗೌಡ ಯತ್ನಿಸುತ್ತಿದ್ದಾರೆ. ಯಾರೇ ಅಧಿಕಾರಿಗಳು ಬಂದರೂ ತಮ್ಮ ಸಮ್ಮತಿ ಪಡೆಯುವಂತೆ ಒತ್ತಡ ಹೇರುತ್ತಿದ್ದರು. ವಿವಿಧ ಇಲಾಖೆಗಳಲ್ಲಿ ತಮ್ಮದೇ ಮಾತು ನಡೆಯಬೇಕು ಎಂದು ಒತ್ತಡ ಹೇಳುತ್ತಿದ್ದರು ಎಂಬ ಆರೋಪಗಳು ಕೂಡ ಈಗ ಕೇಳಿ ಬಂದಿವೆ.

ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಕಟ್ಟಿದ್ದ ಬ್ಯಾನರ್ ತೆರವುಗೊಳಿಸಿದ್ದರಿಂದ ಸಿಟ್ಟಾಗಿದ್ದ ರಾಜೀವ್ ಗೌಡ ಪೌರಾಯುಕ್ತೆ ಅಮೃತ ಗೌಡಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲವಾಗಿ ನಿಂದಿಸಿದ್ದಾರು. ಈ ವಿಚಾರವಾಗಿ ಅಮೃತ ಗೌಡ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ನಂತರ, ಪೊಲೀಸರಿಗೂ ದೂರು ನೀಡಿದ್ದರು. ಈ ವಿಚಾರ ನಂತರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದು ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರಕ್ಕೆ ಶುಭಕೋರುವ ಬ್ಯಾನರ್‌ ಆಗಿತ್ತು.

ಬ್ಯಾನರ್ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದನೆ ಮಾಡಿ, ಬೆದರಿಕೆ ಹಾಕಿರುವ ಆಡಿಯೋ ವೈರಲ್ ಕುರಿತಂತೆ ಮಾತನಾಡಿರುವ ರಾಜೀವ್ ಗೌಡ, ನಾನು ಅಧಿಕಾರಿಯ ಜೊತೆ ಕೆಟ್ಟದಾಗಿ ಮಾತನಾಡಿಲ್ಲ. ಅಧಿಕಾರಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಉದ್ದೇಶ ಪೂರಕವಾಗಿ ನಾನು ಮಾತನಾಡಿಲ್ಲ. ಆಡಿಯೋದಲ್ಲಿ ಮಾತನಾಡಿರುವುದು ನಾನೇ. ಆದರೆ ಕೆಟ್ಟದಾಗಿ ಮತನಾಡಿಲ್ಲ. ಅಧಿಕಾರಿ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹಾಗಾಗಿ ಬೇಸರದಿಂದ ಮತನಾಡಿದ್ದೇನೆ. ಆಯುಕ್ತಗೆ ನಾನು ಬೆಂಕಿ ಹಚ್ಚುತ್ತೇನೆ ಎಂದು ಹೇಳಿಲ್ಲ. ಬದಲಿಗೆ ಫ್ಲೆಕ್ಸ್ ಗೆ ಬೆಂಕಿ ಹಚ್ಚುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ನನ್ನದು ತಪ್ಪಾಗಿದ್ದರೆ ಏನೇ ಕ್ರಮ ತೆಗೆದುಕೊಂಡರು ಎದುರಿಸುತ್ತೇನೆ ಎಂದು ಸಮಜಾಯಿಷಿ ನೀಡಿದ್ದಾರೆ.

ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ ಸಿನಿಮಾದ ಪ್ರಚಾರ ಸಭೆ ನಡೆದಿತ್ತು. ಈ ವೇಳೆ, ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಟ್ರಾಫಿಕ್ ಸಮಸ್ಯೆಗೆ ಉಂಟಾಯಿತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ ಸಿಬ್ಬಂದಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದರು.

error: Content is protected !!
Scroll to Top