ಶಾಲೆಗಳಲ್ಲಿ ವಾಟರ್‌ ಬೆಲ್‌ ಪದ್ಧತಿ ಅಳವಡಿಸಲು ಆದೇಶ

ಮಕ್ಕಳಿಗೆ ನೀರು ಕುಡಿಯಲು ನೆನಪಿಸುವ ವಾಟರ್‌ ಬೆಲ್‌

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ `ವಾಟರ್ ಬೆಲ್’ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ.

ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿರುತ್ತದೆ. ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ ನೀರು ಕುಡಿಯುವಂತೆ ಜ್ಞಾಪಿಸಲು ವಾಟರ್ ಬೆಲ್ ಅನುಷ್ಠಾನಗೊಳಿಸಲು ಸೂಚನೆ ನೀಡಿದೆ.





















































 
 

ವಾಟರ್ ಬೆಲ್ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿತ್ತು. ಅದರಂತೆ ಆಯೋಗದ ಪತ್ರಕ್ಕೆ ನೀರಿನ ಗಂಟೆ ಬಾರಿಸಲು ಶಿಕ್ಷಣ ಇಲಾಖೆ ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಸುತ್ತೋಲೆ ಹೊರಡಿಸಿದ್ದು, ಆಗಾಗ್ಗೆ ವಾಟರ್ ಬೆಲ್ ಹೊಡೆದು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಆದೇಶಿಸಿದೆ.

error: Content is protected !!
Scroll to Top