ಉಡುಪಿ: ಅನಧಿಕೃತವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೆಬ್ರಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೆಮ್ಮಣ್ಣಿನ ವಾಸಿಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಂಗಳೂರು ತಾಲೂಕು ಮೂಡುತೆರಾರ್ ಗ್ರಾಮದ ಗಂಜಿಮಠದ ಸಮೀಪ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳ ವಿರುದ್ಧ ಬಿ.ಎನ್.ಎಸ್. ಮತ್ತು ಕಲಂ ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
























