ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ

ವಲಸೆ ಕಾರ್ಮಿಕರ ದಾಖಲೆ ಪತ್ರಗಳನ್ನು ಪರಿಶೀಲಿಸಿದ ಆರೋಪ ಹೊರಿಸಿ ಬಂಧನ

ಬೆಂಗಳೂರು: ವಲಸೆ ಕಾರ್ಮಿಕರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಪರಿಶೀಲಿಸುತ್ತಿದ್ದ ಹಿಂದೂ ಪರ ಹೋರಾಟಗಾರ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ.

ವಲಸಿಗರಿಗೆ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸ್ ಠಾಣಾ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ನಿನ್ನೆ ರಾತ್ರಿ ಪುನೀತ್ ಕೆರೆಹಳ್ಳಿ ಮನೆಯ ಬಳಿಯೇ ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸ್​ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚಿಗೆ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ‘ದ್ವೇಷದ ಮಾತಿನ ವಿರುದ್ದ ಜನಾಂದೋಲನ ವತಿಯಿಂದ ಇಮೇಲ್​ ಮೂಲಕ ಮನವಿ ಸಲ್ಲಿಸಲಾಗಿತ್ತು.





















































 
 

ಬೆಂಗಳೂರಿನಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪುನೀತ್‌ ಕೆರೆಹಳ್ಳಿ ಮತ್ತು ತಂಡದವರು ಕಳೆದ ಕೆಲವು ದಿನಗಳಿಂದ ಪತ್ತೆಹಚ್ಚಿ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ. ವಲಸೆ ಕಾರ್ಮಿಕರಿರುವ ಸ್ಥಳಗಳಿಗೆ ಹೋಗಿ ಅವರ ದಾಖಲೆಗಳನ್ನು ಕೇಳಿ ಪಡೆದು ಪರಿಶೀಲಿಸುತ್ತಿದ್ದರು.

ಇದರ ವಿಡಿಯೋ ಚಿತ್ರಿಕೆಗಳನ್ನು ಕೂಡ ಮಾಡಿಟ್ಟುಕೊಂಡಿದ್ದಾರೆ. ಇಂಥ ಹಲವು ವಿಡಿಯೋ ತುಣುಕುಗಳು ಕಳೆದ ಕೆಲವು ದಿನಗಳಿಂದ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಪರ-ವಿರೋಧ ಚರ್ಚೆ ಹುಟ್ಟುಹಾಕಿದೆ. ಕೆಲವರು ಪುನೀತ್‌ ಕೆರೆಹಳ್ಳಿಗೆ ದಾಖಲೆ ಪರಿಶೀಲಿಸುವ ಅಧಿಕಾರ ಕೊಟ್ಟವರು ಯಾರು ಎಂಬ ಪ್ರಶ್ನೆ ಎತ್ತಿದ್ದಾರೆ. ಇನ್ನೂ ಕೆಲವರು ಪೊಲೀಸರ ಮಾಡಬೇಕಾದ ಕೆಲಸವನ್ನು ಪುನೀತ್‌ ಕೆರೆಹಳ್ಳಿ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುನೀತ್‌ ಕೆರೆಹಳ್ಳಿ ಬಂಧನ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಆತನ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗ ಒಳಗೆ ಬಿಡದೆ ನಿಯಂತ್ರಿಸಿದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಎಡಪಂಥೀಯರ ಒತ್ತಡಕ್ಕೆ ಮಣಿದು ಸರ್ಕಾರ ಪುನೀತ್ ಕೆರೆಹಳ್ಳಿ ಅವರನ್ನ ವಶಕ್ಕೆ ಪಡೆದಿದೆ. ಪೊಲೀಸರ ಕ್ರಮವನ್ನ ನಾವು ಖಂಡಿಸುತ್ತೇವೆ ಎಂದು ಪುನೀತ್ ಕೆರೆಹಳ್ಳಿ ಬೆಂಬಲಿಗರು ವಿಡಿಯೋ ಮಾಡಿ ಕಿಡಿಕಾರಿದ್ದಾರೆ.

error: Content is protected !!
Scroll to Top