ಉಡುಪಿ: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಹೊಯ್ಸಳ ಶೌರ್ಯ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.
ಕುಂಜಿಬೆಟ್ಟುವಿನಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ದೀಪಕ್, ತಮ್ಮ ಪರಿಸರದಲ್ಲಿನ ವಿದ್ಯುತ್ ಸಮಸ್ಯೆ, ಅನಿಯಮಿತ , ಅಘೋಷಿತ ವಿದ್ಯುತ್ ಕಡಿತ ಸಮಸ್ಯೆಗಳ ಬಗ್ಗೆ ಪತ್ರದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರಿ ವೇಳೆ, ಮುಂಜಾನೆಯ ವೇಳೆ ಓದಲು ಅನುಕೂಲವಾಗುವಂತೆ ವಿದ್ಯುತ್ ಪೂರೈಕೆ ಮಾಡುವುದಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
























