ಬೆಂಕಿ ಅವಘಡ : 13 ಇಲೆಕ್ಟ್ರಿಕ್‌ ಸ್ಕೂಟರ್‌ ಸುಟ್ಟು ಕರಕಲು

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಇಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ.

ಬುಧವಾರ ರಾತ್ರಿ 9:30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆಯೇ ಶೋರೂಂ ಸಿಬ್ಬಂದಿ ಓಡಿ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಶೋರೂಂನಲ್ಲಿದ್ದ 13 ಇಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಕರಕಲಾಗಿವೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣವಾಗಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.





















































 
 
error: Content is protected !!
Scroll to Top