ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

ಪುತ್ತೂರು: ಹಿಂದೂ ನಾಯಕ, RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ‌ಸಂಬಂಧಿಸಿದ ಹಾಗೆ ಮಹತ್ವದ ಆದೇಶವೊಂದನ್ನು ಹೈ ಕೋರ್ಟ್ ನೀಡಿದೆ.

ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆದಿದ್ದು, ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಯಾವುದೇ ಬಲವಂತದ ಅಥವಾ ಒತ್ತಡದ ಕ್ರಮ ತೆಗೆದುಕೊಳ್ಳದಂತೆ ಆದೇಶಿಸಿದೆ.

ಈ ಸಂಬಂಧದ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದ್ದು, ಪ್ರಭಾಕರ ಭಟ್ ಅವರ ಪರ ಖ್ಯಾತ, ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದರು.





















































 
 

error: Content is protected !!
Scroll to Top