ಬೆಂಗಳೂರು: ರಾಜ್ಯದೆಲ್ಲೆಡೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ರಾಮಚಂದ್ರ ಅವರು ಕರ್ತವ್ಯದ ವೇಳೆ, ಕಚೇರಿಯಲ್ಲೇ ಮಹಿಳೆಯರ ಜೊತೆ ಸರಸವಾಡುವ ವಿಡಿಯೋ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ತನಿಖೆಗೆ ಆದೇಶ ನೀಡಿರುವುದಾಗಿದೆ.
ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಈ ಪ್ರಕರಣದ ಸತ್ಯಾಸತ್ಯತೆಯನ್ನು ಎಡಿಜಿಪಿ ಹಿತೇಂದ್ರ ನೇತೃತ್ವದ ತಂಡ ತನಿಖೆ ನಡೆಸಲಿದೆ.
























