ಚಿಕ್ಕಮಗಳೂರು: ಪ್ರವಾಸಿ ವಾಹನವೊಂದು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಆಲ್ದೂರಿನಲ್ಲಿ ನಡೆದಿದೆ.
ನವಮಿ (30) ಮೃತ ದುರ್ದೈವಿ.
ಅಪಘಾತ ನಡೆದ ಬಳಿಕ ಗಾಡಿಯನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ನವಮಿ ಅವರು ಆಲ್ದೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿದ್ದರು.
ಡಿಕ್ಕಿ ಹೊಡೆದ ಗಾಡಿ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
























