ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ವಿಮಾನ ಅವಘಡದಲ್ಲಿ ಮೃತಪಟ್ಟ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ನೂರಾರು ಗಣ್ಯರ ಸಮ್ಮುಖದಲ್ಲಿ, ಸಕಲ ಸರ್ಕಾರಿ ಗೌರವದ ಜೊತೆಗೆ ನಡೆಯಿತು.
ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಲಾಗಿತ್ತು. ಮೃತದೇಹವನ್ನು ಅವರ ಹುಟ್ಟೂರಾದ ಕಟೇವಾಡಿಯಿಂದ ಬಾರಾಮತಿಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಸಲುವಾಗಿ ತರಲಾಗಿತ್ತು.
ಅವರ ಚಿತೆಗೆ ಪುತ್ರರಾದ ಪಾರ್ಥ್ ಪವಾರ್ ಮತ್ತು ಜೇ ಪವಾರ್ ಅವರು ಅಗ್ನಿಸ್ಪರ್ಶ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಶರದ್ ಪವಾರ್ ಮೊದಲಾದವರು ಸ್ಥಳದಲ್ಲಿ ಇದ್ದರು. ಪಾರ್ಥಿವ ಶರೀರಕ್ಕೆ ಕುಟುಂಬ ವರ್ಗ, ರಾಜಕೀಯ ನಾಯಕರು, ಪೊಲೀಸರು, ಅಧಿಕಾರಿಗಳು, ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಅಂತ್ಯಕ್ರಿಯೆ ಸಂದರ್ಭದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಉಪಸ್ಥಿತರಿದ್ದರು.
























