ಸಂಸತ್ ಬಜೆಟ್ ಅಧಿವೇಶನ: ಪ್ರಧಾನಿ ಮೋದಿ ಭಾಷಣ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಚಾಲನೆ ದೊರೆತಿದೆ. ಪ್ರಧಾನಿ ಮೋದಿ ಅವರು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದು, ದೇಶದ ಅಭಿವೃದ್ಧಿಯ ದಿಕ್ಸೂಚಿಯನ್ನು ಬಿಚ್ಚಿಟ್ಟಿದ್ದಾರೆ.

ನಮ್ಮ ಸರ್ಕಾರದ ಮೂಲಮಂತ್ರ ‘ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ’. ಭಾರತ ಈಗ ವೇಗವಾಗಿ ಚಲಿಸುತ್ತಿರುವ ಸುಧಾರಣಾ ಎಕ್ಸ್‌ಪ್ರೆಸ್‌ನಲ್ಲಿದೆ ಎಂಬುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಬಗೆಗೂ ಮಾತನಾಡಿರುವ ಅವರು, ಅವರದ್ದು ಕೇವಲ ಭಾಷಣವಲ್ಲ. 140 ಕೋಟಿ ಭಾರತೀಯರ ಆತ್ಮವಿಶ್ವಾಸ ಮತ್ತು ಯುವ ಶಕ್ತಿಯ ಆಕಾಂಕ್ಷೆಗಳ ಪ್ರತಿಬಿಂಬ ಎಂದು ಹೇಳಿದ್ದಾರೆ.





















































 
 

error: Content is protected !!
Scroll to Top