ತ್ರಿಪುರಾ: ಅಕ್ರಮವಾಗಿ ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಪ್ರದೇಶದ 65 ಎಕರೆ ಸ್ಥಳದಲ್ಲಿ ಬೆಳೆಯಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳ ಸಿಬ್ಬಂದಿ ನಾಶ ಮಾಡಿವೆ.
ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಜ. 29 ರಂದು ಸೋನಮುರಾದ ಹಲವು ಅರಣ್ಯ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ಬೆಳೆಸಲಾಗಿದ್ದ ಗಾಂಜಾ ಗಿಡಗಳನ್ನು ನಾಶ ಮಾಡಲಾಗಿದೆ.
ನಾಶ ಮಾಡಲಾದ ಗಾಂಜಾ ಗಿಡಗಳ ಮೌಲ್ಯ ಸುಮಾರು 27 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
























