ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಪಲಾಯನ ಮಾಡಿದ್ದ ಕಾರು
ಸುಳ್ಯ: ಕೊಡಗು ಸಂಪಾಜೆಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನ ಸಾವಿಗೆ ಕಾರಣವಾಗಿದ್ದ ಕಾರನ್ನು ಮಡಿಕೇರಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಿಕ್ಷಾಕ್ಕೆ ಹಿಂದಿನಿಂದ ಕಾರು ಗುದ್ದಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಸುಂದರ ಸಾವಿಗೀಡಾಗಿದ್ದರು. ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ.
ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಈ ವೇಳೆ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ಚಕ್ರಗಳ ಕೆಳಗೆ ಸಿಲುಕಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊಡಗು ಸಂಪಾಜೆ ಗೇಟಿನ ಬಳಿ ಕಾರು ರಿಕ್ಷಾಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದು ಈ ವೇಳೆ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ಚಕ್ರಗಳ ಕೆಳಗೆ ಸಿಲುಕಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬಿಸೆಲುಮನೆ ರಾಮಣ್ಣ ಗೌಡ ಅವರ ಪುತ್ರ ಸುಂದರ್ ಚಿಟ್ಟಿಕ್ಕಾನ (56) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕ ಕೂಡ ಗಾಯಗೊಂಡಿದ್ದಾರೆ. ಸುಂದರ್ ಈ ಹಿಂದೆ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಪಘಾತದ ಸಮಯದಲ್ಲಿ, ಅವರು ಗ್ರಾಮ ಪಂಚಾಯತ್ ಸದಸ್ಯೆ ಅನಿತಾ ಅವರ ತಾಯಿ ಪದ್ಮಾವತಿ ಅವರನ್ನು ಸಂಪಾಜೆಯಿಂದ ಚೆಡಾವು ಬಳಿಯ ಅವರ ನಿವಾಸಕ್ಕೆ ಕರೆದೊಯ್ಯುತ್ತಿದ್ದರು.
























