ಪುತ್ತೂರು: ನಗರದ ಹಿರಿಮೆ ಹೆಚ್ಚಿಸುವ ಪುತ್ತೂರು ನ್ಯಾಯಾಲಯ ಸಂಕೀರ್ಣವನ್ನು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿ ಆಗಮಿಸಿದ ಅತಿಥಿಗಳು ಹೊಸ ನ್ಯಾಯಾಲಯ ಸಂಕೀರ್ಣದ ಫಲಕ ಅನಾವರಣ ಮಾಡಿ ರಿಬ್ಬನ್ ಕತ್ತರಿಸಿ, ದೀಪ ಬೆಳಗುವ ಮೂಲಕ ಕೋರ್ಟ್ನ ಕಾರ್ಯ ಕಲಾಪಗಳಿಗೆ ಚಾಲನೆ ನೀಡಿದರು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಮೂರ್ತಿ ಹೆಚ್.ಟಿ. ನರೇಂದ್ರ ಪ್ರಸಾದ್, ಸಂಸದ ಕ್ಯಾ ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರು ಉಪಸ್ಥಿತರಿದ್ದರು.
























