ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌

ಭ್ರಷ್ಟರಿಗೆ ಕೊನೆಗೆ ಆಗುವುದು ಇದೇ ಗತಿ ಎಂದು ಪ್ರತಿಕ್ರಿಯಿಸಿದ ಜನ

ಬೆಂಗಳೂರು: ನಾಲ್ಕು ಲಕ್ಷ ರೂ. ಲಂಚ ಪಡೆವಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಅಕರಿಗಳ ಬಲೆಗೆ ಬಿದ್ದಿರುವ ಪೊಲೀಸ್ ಇನ್‌ಸ್ಪೆ ಕ್ಟರ್ ಮಾಡಿರುವ ಹೈಡ್ರಾಮಾದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಈ ವಿಡಿಯೋಗೆ ಜನರಿಂದಲೂ ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನವರು ಭ್ರಷ್ಟರಿಗೆ ಕೊನೆಗೆ ಆಗುವ ಗತಿ ಇದುವೆ ಎಂದು ಬರೆದುಕೊಂಡಿದ್ದಾರೆ.

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.





















































 
 

ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ 1 ಲಕ್ಷ ರೂಪಾಯಿ ಈಗಾಗಲೇ ಪಡೆದುಕೊಂಡಿದ್ದರು. ಉಳಿದ 4 ಲಕ್ಷ ರೂಪಾಯಿ ಸ್ವೀಕರಿಸುವಾಗ ಟ್ರ್ಯಾಪ್ ಆಗಿದ್ದು, ಧನರಾಜ್ ಎಂಬವರು ನೀಡಿದ ದೂರಿನನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ.

ಚಾಮರಾಜಪೇಟೆಯ ಸಿಎಆರ್ ಮೈದಾನದಲ್ಲಿ ನಡೆದ ಈ ಟ್ರ್ಯಾಪ್ ವೇಳೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ ನಡೆಸಿದ ಘಟನೆ ನಡೆದಿದೆ. ರಂಪಾಟ ನಡೆಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಇನ್‌ಸ್ಪೆಕ್ಟರ್ ಗೋವಿಂದರಾಜು ಉಳಿದ 4 ಲಕ್ಷ ರೂಪಾಯಿ ಪಡೆಯಲು ಚಾಮರಾಜಪೇಟೆಯ ಸಿಎಆರ್ ಮೈದಾನಕ್ಕೆ ಬಂದಿದ್ದರು. ಇದಕ್ಕೂ ಮೊದಲೇ ಲೋಕಾಯುಕ್ತ ಅಧಿಕಾರಿಗಳು ಅಲ್ಲಿಗೆ ಬಂದಿದ್ದರು. ಇದು ಅರಿವಿಲ್ಲದೆ ಗೋವಿಂದರಾಜು 4 ಲಕ್ಷ ರೂ ಹಣ ಸ್ವೀಕರಿಸುತ್ತಿದ್ದಂತೆಯೇ ಲೋಕಾಯುಕ್ತ ಪೊಲೀಸರು ಸುತ್ತುವರಿದು ಬಂಧಿಸಿದರು.

ಲೋಕಾಯುಕ್ತ ಪೊಲೀಸರು ತನ್ನನ್ನು ಹಿಡಿಯುತ್ತಿದ್ದಂತೆಯೇ ಇನ್‌ಸ್ಪೆಕ್ಟರ್ ಗೋವಿಂದರಾಜು ಕೂಗಾಡಲು ಶುರು ಮಾಡಿದರು. ನಾನು ನಿಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿಲ್ಲ ಸರ್… ಎಂದು ಜೋರಾಗಿ ಕಿರುಚುತ್ತಾ ಹೈಡ್ರಾಮಾ ಸೃಷ್ಟಿಸಿದರು. ಆದರೆ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಇನ್ನೂ 40ರ ಹರೆಯದ ಆಸುಪಾಸಿನಲ್ಲಿರುವ ಗೋವಿಂದರಾಜು ಭಾರಿ ಲಂಚಕೋರರಾಗಿದ್ದರು ಎಂದು ಅನೇಕ ಮಂದಿ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕಿರು ಹರೆಯದಲ್ಲೇ ಲಂಚಕ್ಕೆ ಕೈಚಾಚಿ ಈ ಪೊಲೀಸ್‌ ಅಧಿಕಾರಿ ತನ್ನ ವೃತ್ತಿಜೀವನವನ್ನು ಹಾಳು ಮಾಡಿಕೊಂಡದ್ದಲ್ಲದೆ, ಪೊಲೀಸ್‌ ಇಲಾಖೆಗೂ ಕಳಂಕ ಹಚ್ಚಿದರು ಅಂದು ಕೆಲವರು ಪ್ರತಿಕ್ರಿಯಿಸಿದ್ದಾರೆ.

error: Content is protected !!
Scroll to Top