ಮಂಗಳೂರು: ತಂದೆಯೇ 18 ವರ್ಷದ ಮಗಳನ್ನು ಕಡಿದು ಕೊಲೆಗೈದ ದಾರುಣ ಘಟನೆ ಕೇರಳ-ಕರ್ನಾಟಕ ಗಡಿಭಾಗದ ತಲಪಾಡಿ ಸಮೀಪ ತೂಮಿನಾಡು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ತಂದೆ ಉಮ್ಮರ್ ಫಾರೂಕ್‌ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎನ್ನಲಾಗಿದೆ.
ಉಮರ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಪತ್ನಿಯ ಸೋದರಿಯ ಮನೆಯಲ್ಲಿ ವಾಸವಿದ್ದ. ಸೋಮವಾರ ಸಂಜೆ 5.30ರ ಹೊತ್ತಿಗೆ ಉಮರ್ ಮತ್ತು ಆತನ ಬಾವ (ಪತ್ನಿಯ ಸೋದರಿಯ ಪತಿ) ಶೇಕುಂಞ ಎಂಬವರ ನಡುವೆ ಆಸ್ತಿ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಉಮರ್ ಹರಿತ ಆಯುಧದಿಂದ ಶೇಖುಞ್ಞ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ.
ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ ಉಳಿಸಲಾಗಲಿಲ್ಲ, ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದು, ಆಸ್ತಿಗಾಗಿ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
























