ಬಂಟ್ವಾಳ: ಅಕ್ರಮವಾಗಿ ಮನೆ ಪ್ರವೇಶಿಸಿ ಮಾವನೇ (ಗಂಡನ ತಂದೆ) ಸೊಸೆಯೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಈ ವೇಳೆ ಮಹಿಳೆ ಮಾವನಿಂದ ತಪ್ಪಿಸಿಕೊಂಡು ಹೊರಕ್ಕೆ ಓಡಿ ಬಂದಿದ್ದು, ಈ ವೇಳೆ ಪತಿಯೂ ಸಹ ಮಾವನ ಪರವಾಗಿಯೇ ಇದ್ದು, ಹಲ್ಲೆಗೊಳಗಾದ ಪತ್ನಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾನೆ. ಆ ಬಳಿಕ ಮಹಿಳೆಯ ಹೆತ್ತವರು ಆಕೆಗೆ ಸಂಪಾಜೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
























