ಕಡಬ: ನಾಯಿ ಅಡ್ಡ ಬಂದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಪಂಜ ರಸ್ತೆಯ ಕೊಡಿಂಬಾಳ ಮಧುರ ಚೆಡವು ಎಂಬಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಠಾಣಾ ಎ.ಎಸ್. ಐ. ಸೀತಾರಾಮ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಕಾರಿಗೆ ನಾಯಿ ಅಡ್ಡ ಬಂದಿದ್ದು, ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ.
ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನಲ್ಲಿದ್ದ ಸೀತಾರಾಮ್ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾಗಿ ತಿಳಿದು ಬಂದಿದೆ.
























