ಪುತ್ತೂರು: ವಿವಾಹದ ಭರವಸೆ ನೀಡಿ ಯುವತಿಯೊಬ್ಬಳನ್ನು ಗರ್ಭವತಿಯನ್ನಾಗಿ ಮಾಡಿದ ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಬಕ ನಿವಾಸಿ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
























