ಪುತ್ತೂರು: ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಡೆದಿದೆ.
ಲಾರಿ ತಮಿಳುನಾಡು ನೋಂದಣಿಯದಿದಾಗಿದ್ದು, ಸರಕು ತುಂಬಿಕೊಂಡು ಮಂಗಳೂರಿನಿಂದ ಮಡಿಕೇರಿಯತ್ತ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಂಚಿನ ತಡೆ ಬೇಲಿಗೆ ಗುದ್ದಿದೆ. ಬಳಿಕ ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬದ ಮೇಲೆ ಬಿದ್ದಿದೆ.
ಲಾರಿ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ ಸರಕುಗಳೆಲ್ಲಾ ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ರಾತ್ರಿಯೇ ಅವೆಲ್ಲವನ್ನೂ ತೆರವು ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಒದಗಿಸಿ ಕೊಡಲಾಗಿದೆ.
























