ಶಾಸಕರ ಪತ್ನಿಯ ಅವಹೇಳನ: ಆರೋಪಿಯ ಬಂಧನ

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಹೆಂಡತಿಯ ಬಗ್ಗೆ ಶಾಸಕ ಕೆ. ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತುಗಳನ್ನು ಉಲ್ಲೇಖ ಮಾಡಿ ಫೇಸ್‌ಬುಕ್‌ನಲ್ಲಿ ಶಾಸಕರ ಪತ್ನಿಯನ್ನು ವ್ಯಕ್ತಿಯೊಬ್ಬ ಅವಮಾನಿಸಿದ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿ ಬಂಟ್ವಾಳದ ಅಮ್ಟಾಡಿಯ ಶರತ್ ರೈ ಎಂಬಾತನನ್ನು ಬಂಧಿಸಲಾಗಿದೆ. ಈತ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೇದವ್ಯಾಸ್ ಕಾಮತ್ ಅವರ ಪತ್ನಿಯನ್ನು ಅವಮಾನಿಸುವಂತೆ ಪೋಸ್ಟ್ ಹಾಕಿದ್ದ. ಈ ಸಂಬಂಧ ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದರು.

ಶಾಸಕರ ಪತ್ನಿಯ ಗೌರವಕ್ಕೆ ಚ್ಯುತಿ ತರುವ ಕೆಲಸ ಇದಾಗಿದೆ. ಆರೋಪಿಯ ಪೋಸ್ಟ್ ಮಹಿಳೆಯರ ಮೇಲೆ ಕೀಳು ಅಭಿರುಚಿ ಹೊಂದಿದ ಪೋಸ್ಟ್ ಇದಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ.





















































 
 

error: Content is protected !!
Scroll to Top