ವಿಟ್ಲ: ಅಪಘಾತವೊಂದರಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಪುರುಷೋತ್ತಮ ಆಚಾರ್ಯ ಕೈಂತಿಲ(68) ಎಂದು ಗುರುತಿಸಲಾಗಿದೆ. ಅವರಿಗೆ ಕೆಲ ದಿನಗಳ ಹಿಂದೆ ಮಂಗಿಲಪದವು ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿತ್ತು.
ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
























