ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ: ಸುಟ್ಟು ಕರಕಲಾದ ವಸ್ತುಗಳು

ವೀರಕಂಭ: ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿರುವ ವಸ್ತುಗಳೆಲ್ಲಾ ಆಹುತಿಯಾದ ಘಟನೆ ಗಣೇಶ್ ಕೋಡಿಯಲ್ಲಿ ನಡೆದಿದೆ.

ರಾಜೇಶ್ವರಿ ಎಂಬವರ ‌ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವುದಾಗಿದೆ.

ಇದರಿಂದಾಗಿ ಮನೆಯಲ್ಲಿದ್ದ ಬಟ್ಟೆ ಬರೆ ಸೇರಿದಂತೆ ಇತರ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.





















































 
 

ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಕ್ಕಪಕ್ಕದ ಮನೆಯವರು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top