ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದ ಕಾರಣದಿಂದ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ(93) ಅವರು ಅಂಗಾಂಗ ‌ವೈಫಲ್ಯದಿಂದ ನಿಧನರಾದರು.

ಅವರು ದಿ ಹಿಂದೂ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು, ಪತ್ರಿಕಾ ಅಕಾಡೆಮಿ ಹಾಗೂ ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು . ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.





















































 
 
error: Content is protected !!
Scroll to Top