ಬೆಳಗಾವಿ: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭಿವೃದ್ಧಿಯ ಕೆಲಸಗಳನ್ನು ಮಾಡಿದ್ದರೆ ಅಧಿಕಾರ ಪಡೆಯಲು ಗ್ಯಾರಂಟಿ ಯೋಜನೆಗಳ ಭರವಸೆ ನೀಡುವ ಅಗತ್ಯತೆ ಇರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಆದ್ದರಿಂದಲೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಗ್ಯಾರಂಟಿ ಯೋಜನೆಗಳ ಮೊರೆ ಹೋಗಬೇಕಾಯಿತು ಎಂದು ವ್ಯಂಗ್ಯ ಮಾಡಿದ್ದಾರೆ.
ಅಭಿವೃದ್ಧಿ ಕೆಲಸಗಳನ್ನು ಮಾಡದವರು ಇಂದು ಕೇಂದ್ರ ಸರ್ಕಾರದ ಬಗ್ಗೆ ಸುಳ್ಳುಗಳನ್ನು ಹರಡುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಯುಪಿಎ ಅವಧಿಯಲ್ಲಿ ಹದೆಗೆಟ್ಟಿದ್ದ ಆರ್ಥಿಕತೆಯನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸುಧಾರಿಸಿದೆ. ಜೊತೆಗೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಕೇಂದ್ರದ ಎಲ್ಲಾ ಯೋಜನೆಗಳು ದೇಶದ ಮೂಲೆ ಮೂಲೆಯನ್ನು ತಲುಪಿದೆ. ರೈತರು, ಬಡವರು, ಮಹಿಳೆಯರು, ಯುವಕರ ಏಳಿಗೆಯೇ ಕೇಂದ್ರ ಸರ್ಕಾರದ ಗುರಿ ಎಂದು ವಿಜಯೇಂದ್ರ ತಿಳಿಸಿದ್ದಾರೆ.
























