ಪಿಕಪ್‌ ಪಲ್ಟಿಯಾಗಿ ಚಾಲಕ ಸಾವು

ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ.11ರಂದು ನಡೆದಿದೆ.


ಮೃತ ವ್ಯಕ್ತಿ ಅಳಕೆ ನಿವಾಸಿ ಪುಟ್ಟ (31) ಎಂಬವರಾಗಿದ್ದಾರೆ.

ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸುವ ವೇಳೆ ಪಿಕಪ್‌ ವಾಹನ ಪಲ್ಟಿಯಾಗಿದೆ. ಮೇಲ್ಬಾಗದ ರಸ್ತೆಯಿಂದ ವಾಹನ ಕೆಳಭಾಗದ ರಸ್ತೆಗೆ ಪಿಕಪ್‌ ಉರುಳಿ ಬಿದ್ದಿದ್ದು, ಚಾಲಕ ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಪಿಕಪ್‍ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಹೇಮಚಂದ್ರ ಅವಿವಾಹಿತರಾಗಿದ್ದು, ಇವರೇ ಮನೆಗೆ ಆಧಾರ ಸ್ತಂಭವಾಗಿದ್ದರು. ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















































 
 
error: Content is protected !!
Scroll to Top