ಬೆಳ್ತಂಗಡಿ : ಗ್ಯಾಸ್‌ ಸೋರಿಕೆಯಾಗಿ ಅಂಗಡಿ ಬೆಂಕಿಗಾಹುತಿ

ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆ

ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿಹತ್ತಿಕೊಂಡು ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್‌ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ KAF ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್‌ನಲ್ಲಿ ಇಬ್ಬರು ಕೆಲಸದವರು ಫೆ.14ರಂದು ಬೆಳಗ್ಗೆ 7.30ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಾಲಿಗೆ ಅಕ್ಕಪಕ್ಕದ ಶಾಪ್‌ಗಳಿಗೂ ಹಾನಿಯಾಗಿದೆ. ಗ್ಯಾಸ್ ಸೋರಿಕೆಯಿಂದ ಯಾವುದೇ ದೊಡ್ಡ ಅನಾಹುತ ಉಂಟಾಗಿಲ್ಲ.





















































 
 

ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೇ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಚೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

error: Content is protected !!
Scroll to Top