ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಸಚಿವ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ.
ಫೆ. 28 ರಿಂದ ಮಾ. 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಮತ್ತು ಮಾ. 18 ರಿಂದ ಏ. 2 ರ ವರೆಗೆ ಹತ್ತನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಪಿಯುಸಿ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ಮತ್ತು ಹತ್ತನೇ ತರಗತಿ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರ ವರೆಗೆ ನಡೆಯಲಿವೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದ್ದಾರೆ.
























