ಪುತ್ತೂರು: ಸಾರ್ವಜನಿಕವಾಗಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ವಿಟ್ಲ ಪಡ್ನೂರಿನ ಮೊಹಮ್ಮದ್ ಮೊಸಾದ್ ಎಸ್ ಎಂದು ಗುರುತಿಸಲಾಗಿದ್ದು, ಆತ ಡ್ರಗ್ಸ್ ಸೇವನೆ ಮಾಡಿರುವ ಸಂಗತಿ ಸಹ ವೈದ್ಯಕೀಯ ಪರೀಕ್ಷೆಯಲ್ಲಿ ಬಯಲಾಗಿದೆ.
ಸಾರ್ವಜನಿಕರಿಂದ ಬಂದ ಮಾಹಿತಿಯನ್ವಯ ರೌಂಡ್ಸ್ ವೇಳೆ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.
























