ಕುರ್ಚಿ ಕಿತ್ತಾಟದ ಮಧ್ಯೆ ವಿದೇಶಕ್ಕೆ ಹಾರಿದ ಶಾಸಕರು

ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸಕ್ಕೆ ನಾನಾ ಅರ್ಥ

ಬೆಂಗಳೂರು : ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ತೀವ್ರಗೊಂಡಿರುವಾಗಲೇ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳು ವಿದೇಶಕ್ಕಡಡ ಹಾರಿದ್ದಾರೆ. ಇವರೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದವರು ಎನ್ನುವುದು ಗಮನಾರ್ಹ. ಮೊದಲು ಸರ್ಕಾರಿ ಪ್ರಾಯೋಜಿತ ಎಂದು ಹೇಳಲಾಗಿದ್ದ ಈ ಟೂರ್, ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಖಾಸಗಿ ಟ್ರಿಪ್ ಎಂದು ಬದಲಾಗಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್​ಸಿಗಳು ವಿದೇಶಕ್ಕೆ ಹಾರಿದ್ದಾರೆ.

ಶಾಸಕರಾದ ದೇವೇಂದ್ರಪ್ಪ, ಎಚ್.ಡಿ ತಮ್ಮಯ್ಯ, ಹಂಪನಗೌಡ ಬಾದರ್ಲಿ, ಪುಟ್ಟರಂಗಶೆಟ್ಟಿ, ಬಿ.ಎಂ ನಾಗರಾಜ್, ಯಶವಂತರಾಯಗೌಡ ಪಾಟೀಲ, ಎಸ್.ಎಸ್.ಮಲ್ಲಿಕಾರ್ಜುನ್, ಶರಣಗೌಡ ಬಯ್ಯಾಪುರ, ಎಂಎಲ್​ಸಿಗಳಾದ ವಸಂತ್ ಕುಮಾರ್, ನಾಗರಾಜ್ ಯಾದವ್, ಡಾ.ಡಿ.ತಿಮಯ್ಯ ವಿದೇಶಕ್ಕೆ ಹೋದವರು.





















































 
 

ಮಲೇಷಿಯನ್ ಏರ್‌ಲೈನ್ಸ್‌ನ MH 193 ವಿಮಾನದಲ್ಲಿ ಶಾಸಕರು ತೆರಳಿದ್ದಾರೆ. ಆಸ್ಟ್ರೇಲಿಯಾಗೆ ನೇರ ವಿಮಾನ ಇಲ್ಲದ ಕಾರಣ ಟ್ರಾನ್ಸಿಟ್ ಫ್ಲೈಟ್‌ ಮೂಲಕ ತೆರಳಲು ಪ್ಲಾನ್ ಮಾಡಿದ್ದಾರೆ. ಬೆಂಗಳೂರಿನಿಂದ ಮಲೇಷ್ಯಾ ರಾಜಧಾನಿ ಕೌಲಾಲಂಪುರಕ್ಕೆ ತೆರಳುವ ಶಾಸಕರು, ಅಲ್ಲಿಂದ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸುತ್ತಾರೆ.

ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಹೋಗುವ ಶಾಸಕರು ಮಾರ್ಚ್ 1ರವರೆಗೆ ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಆರಂಭದಲ್ಲಿ 35 ಶಾಸಕರು ಸಿದ್ಧರಾಗಿದ್ದರು. ಬಳಿಕ ಶಾಸಕರ ಸಂಖ್ಯೆ 21ಕ್ಕೆ ಇಳಿದಿತ್ತು. ಆದರೆ ರಾತ್ರಿಯಾಗ್ತಿದ್ದಂತೆಯೇ 11 ಶಾಸಕರು ಮಾತ್ರ ವಿದೇಶಕ್ಕೆ ಹಾರಿದ್ದಾರೆ.

ಮತ್ತೊಂದೆಡೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಪತ್ನಿ ಹಾಗೂ ಸಂಬಂಧಿಕರ ಜೊತೆಗೆ ಕೊಲಂಬಿಯಾಗೆ ತೆರಳಿದ್ದಾರೆ. ಮಂಗಳವಾರ ಬೆಳಗ್ಗೆ 7 ಸ್ನೇಹಿತರು, ಸಂಬಂಧಿಕರು, ಪತ್ನಿ ಜತೆ ಎಸ್.ಎಸ್ ಮಲ್ಲಿಕಾರ್ಜುನ ಕೆಂಪೇಗೌಡ ಏರ್​ಪೋರ್ಟ್​ನಿಂದ ಥೈಲ್ಯಾಂಡ್​​ನ ಪುಕೆಟ್​ ನಗರಕ್ಕೆ ತೆರದ್ದು, ಅಲ್ಲಿಂದ ದಕ್ಷಿಣ ಅಮೆರಿಕಾದ ಕೊಲಂಬಿಯಾಗೆ ಪ್ರಯಾಣ ಬೆಳೆಸಿದ್ದಾರೆ.

ಶಾಸಕರು ವಿದೇಶಕ್ಕೆ ತೆರಳುವ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಮಾಹಿತಿ ನೀಡಿದ್ದಾರೆ. ಅವರು ಏನೇ ಮಾಹಿತಿ ನೀಡಿದರೂ, ಖಾಸಗಿ ಟೂರ್ ಈಗ ಪೊಲಿಟಿಕಲ್ ಟೂರ್ ಎನ್ನುವ ರೀತಿಯ ಬಿಂಬಿತವಾಗಿದೆ. ಶಾಸಕರೆಲ್ಲ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲೇ ಪ್ರವಾಸ ಹೊರಟಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ವೆಂಕಟೇಶ್, ನಾನು ವಿದೇಶಕ್ಕೆ ಹೋಗುತ್ತಿಲ್ಲ ಎಂದಿದ್ದಾರೆ. ಶಾಸಕರನ್ನು ವಿದೇಶಕ್ಕೆ ಕಳುಹಿಸಲು ನಾನೇನು ಸಿಎಂ ಆಗಬೇಕಾ ಎಂದು ಪ್ರಶ್ನಿಸಿದ್ದಾರೆ. ಹಾಗಾದರೆ, ಸಿಎಂ ಕುರ್ಚಿ ಉಳಿಸಿಕೊಳ್ಳುವವರು ಫಾರಿನ್‌ಗೆ ಕಳುಹಿಸುತ್ತಿದ್ದಾರಾ ಎಂಬ ಪ್ರಶ್ನೆಗೆ ‘ಗೊತ್ತಿಲ್ಲ’ ಎಂದು ನುಣುಚಿಕೊಂಡಿದ್ದಾರೆ.

error: Content is protected !!
Scroll to Top