ಕರಾವಳಿಯಲ್ಲಿ ಗುರುವಾರದಿಂದ ರಮ್ಜಾನ್‌ ಉಪವಾಸ ಆರಂಭ

ಮಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗುರುವಾರದಿಂದ ಪವಿತ್ರ ರಮ್ಜಾನ್‌ ಉಪವಾಸ ಆರಂಭವಾಗಲಿದೆ. ಪವಿತ್ರ ರಮ್ಜಾನ್‌ನ ಪ್ರಥಮ ಚಂದ್ರದರ್ಶನ ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ಉಪವಾಸ ವ್ರತ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾನಿ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.

ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಖಾಝಿ ಝನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾ‌ರ್ ಮಾಣಿ ತಿಳಿಸಿದ್ದಾರೆ.

error: Content is protected !!
Scroll to Top