ಕೆಲಸಕ್ಕೆ ತೆರಳಿದ್ದ ಯುವಕ ಶವವಾಗಿ ಪತ್ತೆ

ಹಾಸನ: ಕೆಲಸಕ್ಕೆಂದು ಫ್ಯಾಕ್ಟರಿಗೆ ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಹನುಮಂತಪುರ ಸಮೀಪ ನಡೆದಿದೆ.

ಮೃತ ಯುವಕನನ್ನು ಪುನೀತ್(27) ಎಂದು ಗುರುತಿಸಲಾಗಿದೆ.

ಕಳೆದ ಆರು ತಿಂಗಳಿನಿಂದ ಹನುಮಂತಪುರ ಬಳಿಯ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಕೆಲಸಕ್ಕೆ ಸೇರಿದ್ದ. ಆತ ಎಂದಿನಂತೆ ಬುಧವಾರ ಸಹ ಸಮವಸ್ತ್ರ ಧರಿಸಿ ಕೆಲಸಕ್ಕೆಂದು ಹೋಗಿದ್ದಾಗಿ ತಿಳಿದು ಬಂದಿದೆ.





















































 
 

ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದಿರುವ ಪೊಲೀಸರು, ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸಾವಿಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

error: Content is protected !!
Scroll to Top