ನರಹಂತಕ ಆನೆಯನ್ನು ಸೆರೆಹಿಡಿಯಲು ಸಕ್ರೆಬೈಲು ಸಾಕಾನೆಗಳ ಮೊರೆ ಹೋದ ಅರಣ್ಯ ಇಲಾಖೆ

ಚಿಕ್ಕಮಗಳೂರು: ನರಹಂತಕ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಸಕ್ರೆಬೈಲು ಆನೆ ಬಿಡಾರದ ಐದು ಸಾಕಾನೆಗಳನ್ನು ಹುಣಸೇಹಳ್ಳಿಯ ಪುರ ಎಂಬಲ್ಲಿಗೆ ಕರೆ ತರಲಾಗಿದೆ.

ಕೆಲ ದಿನದ ಹಿಂದೆ ಕಾಡಾನೆ ದಾಳಿಗೆ ತುತ್ತಾಗಿ ಯಲ್ಲಪ್ಪ ಎಂಬುವವರು ಸಾವನ್ನಪ್ಪಿದ್ದರು. ಈ ಘಟನೆಯಿಂದ ರೊಚ್ಚಿಗೆದ್ದ ರೈತರು ಹಾಗೂ ಸ್ಥಳೀಯರು ಬಾಳೆಹೊನ್ನೂರು ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಆನೆಯನ್ನು ಕೂಡಲೇ ಸೆರೆಹಿಡಿಯುವಂತೆ ಆಗ್ರಹಿಸಿದ್ದರು. ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ, ತಕ್ಷಣವೇ ನರಹಂತಕ ಆನೆಯನ್ನು ಸೆರೆಹಿಡಿಯಲು ಮತ್ತು ಉಳಿದ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಆದೇಶಿಸಿದೆ.





















































 
 

ಹುಣಸೇಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ರೈತರು ತೋಟಕ್ಕೆ ಹೋಗಲು ಭಯಪಡುವಂತಾಗಿದೆ. ಇಂದಿನಿಂದ ಆರಂಭವಾಗಿರುವ ಈ ಕಾರ್ಯಾಚರಣೆಯು ಎಷ್ಟು ದಿನ ನಡೆಯಲಿದೆ ಎಂಬುದು ಕಾಡಾನೆಗಳ ಪತ್ತೆಯ ಮೇಲೆ ನಿರ್ಧಾರವಾಗಲಿದೆ. ಸ್ಥಳದಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಕಾರ್ಯಾಚರಣೆಯ ಮೇಲೆ ನಿಗಾ ಇರಿಸಿದ್ದಾರೆ.

error: Content is protected !!
Scroll to Top