ಕಾರ್ಕಳ: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಯರ್ಲಪ್ಪಾಡಿಯಲ್ಲಿ ನಡೆದಿದೆ.
ಸುಹೇಶ್ (22) ಎಂಬವರೇ ಮೃತ ದುರ್ದೈವಿ. ಮಧ್ಯಾಹ್ನ ವೇಳೆ ಮನೆಯ ಊಟದ ಕೋಣೆಯಲ್ಲಿ ಕುಳಿತಿದ್ದ ಅವರು ಏಕಾಏಕಿ ಬೊಬ್ಬೆ ಹೊಡೆಯುತ್ತಾ ಕೆಳಕ್ಕೆ ಬಿದ್ದಿದ್ದಾಗಿ ತಿಳಿದು ಬಂದಿದೆ. ಆ ಬಳಿಕ ಅಸ್ವಸ್ಥರಾಗಿ ನರಳಾಡುತ್ತಿದ್ದ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಸುಹೇಶ್ ಅವರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಕಾರ್ಕಳ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
























