ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಶಂಕೆ
ಪುತ್ತೂರು: ನಗರದ ಹಾರಾಡಿ ಸಮೀಪದ ರೈಲ್ವೆ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಹಳಿಯ ಬಳಿ ಶವವನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪುತ್ತೂರು ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯಂತೆ ರೈಲು ಡಿಕ್ಕಿಯಿಂದಲೇ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

