ಆಸ್ತಿ ವಿವಾದ: ನ್ಯಾಯಕ್ಕಾಗಿ ಪೊಲೀಸರು ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಚಿಕ್ಕಮಗಳೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿ ಹೆತ್ತವರು, ಸಹೋದರಿಯನ್ನು ಕಳೆದುಕೊಂಡಿದ್ದ ಯುವಕನೊಬ್ಬ ಪೊಲೀಸ್ ಸ್ಟೇಷನ್ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾನೆ.

ಯುವಕನನ್ನು ‌ಪುನೀತ್ ಎಂದು ಗುರುತಿಸಲಾಗಿದೆ.

ಈತ ತನ್ನ ಹೆತ್ತವರು ಬಿಟ್ಟು ಹೋಗಿದ್ದ ಎರಡು ಸಣ್ಣ ಮನೆಗಳ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದನು. ಆತನ ಅತ್ತೆಯೇ ಆತನ ಹಾದಿಗೆ ಅಡ್ಡಗಾಲು ಹಾಕುತ್ತಿದ್ದರು ಎಂದು ತಿಳಿದು ಬಂದಿದೆ. ಪುನೀತ್ ಪೋಷಕರು ತನ್ನ ಬಳಿ ಹಣ ಪಡೆದಿದ್ದಾಗಿ ಹೇಳಿ ಮನೆಯ ಹಕ್ಕನ್ನು ಆತನಿಗೆ ನೀಡಲು ನಿರಾಕರಿಸಿದ್ದರು.





















































 
 

ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಪುನೀತ್ ಅಲ್ಲಿಯೂ ತನಗೆ ನ್ಯಾಯ ದೊರೆಯುವ ಲಕ್ಷಣ ಕಾಣದೇ ಇದ್ದಾಗ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಜಿಲ್ಲಾಸ್ಪತ್ರೆಗೆ ಪೊಲೀಸರು ಸಾಗಿಸಿದ್ದು, ಆತನ ಕತ್ತಿಗೆ ಹನ್ನೊಂದು ಹೊಲಿಗೆಗಳನ್ನು ಹಾಕಲಾಗಿದೆ ಎಂದು ತಿಳಿದು ಬಂದಿದೆ. ಯುವಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಆದರೆ ಚಿಕಿತ್ಸೆಯ ಬಳಿಕ ಆತ ಪೊಲೀಸರಿಂದ ತಪ್ಪಿಸಿಕೊಂಡು ನಾಪತ್ತೆಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top