ಮಂಗಳೂರು: ಅಂತರಾಜ್ಯ ಗಾಂಜಾ ಮಾರಾಟ ಜಾಲವನ್ನು ಬೇಧಿಸಿರುವ ಮಂಗಳೂರು ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 22 ಕೆ.ಜಿ. 250 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಹತ್ತಿರ ಅಕ್ರಮ ಗಾಂಜಾ ಮಾರಾಟ ನಡೆಯುತ್ತಿರುವ ಖಚಿತ ಮಾಹಿತಿಯನ್ವಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿರುವುದಾಗಿದೆ.
ಆರೋಪಿಗಷನ್ನು ಕರಣ್ ಬಾಬು ರಾಮ್ ಜಾದವ್, ಸಮೀರ್ ಶಾ, MH ಮಯ್ಯದಿ, ಇಬ್ರಾಹಿಂ ಕರೀಂ ಎಂದು ಗುರುತಿಸಲಾಗಿದೆ.
ಆರೋಪಿಗಳ ವಶದಿಂದ 22.250 ಕೆಜಿ ដា (ជាយ 5 ₹11,12,500), 6 ಮೊಬೈಲ್ ಫೋನ್ಗಳು (₹18,000) ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ KA-20-HE-2915 ಮತ್ತು KA-19-HP-6021 ಸಂಖ್ಯೆಯ ಸ್ಕೂಟರ್ಗಳನ್ನು (₹1,00,000) ವಶಪಡಿಸಿಕೊಂಡಿದ್ದಾರೆ. ಒಟ್ಟು ವಶಪಡಿಸಿಕೊಂಡ ವಸ್ತುಗಳ ಮೌಲ್ಯ ₹12,30,500 ಎಂದು ಅಂದಾಜಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕರಣ್ ಜಾದವ್ ಮತ್ತು ಸಮೀರ್ ಶಾ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮೂಲದ ವ್ಯಕ್ತಿಗಳಿಂದ ಗಾಂಜಾ ಪಡೆದು ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯ ಎಂ.ಎಚ್. ಮಯ್ಯದಿ ಹಾಗೂ ಮಂಗಳೂರಿನ ಇಬ್ರಾಹಿಂ ಕಲೀಲ್ ಅವರಿಗೆ ತಲುಪಿಸುತ್ತಿದ್ದರು ಎಂಬುದು ತಿಳಿದು ಬಂದಿದೆ. ಈ ಇಬ್ಬರು ಆರೋಪಿಗಳು ಉಡುಪಿ, ಮಲ್ಪೆ, ಕಾರ್ಕಳ, ಮುಲ್ಕಿ, ಸುರತ್ಕಲ್, ಪಣಂಬೂರು ಹಾಗೂ ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನವೂ ಹಲವು ಬಾರಿ ಅಕ್ರಮವಾಗಿ ಗಾಂಜಾ ತಂದು ಮಾರಾಟ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 21/2026ರಡಿ ಎನ್ಡಿಪಿಎಸ್ ಕಾಯ್ದೆ ಕಲಂ 8(C), 20(b)(ii)(C) ಅನ್ವಯ ಪ್ರಕರಣ ದಾಖಲಿಸಲಾಗಿದೆ.
























