ಬುಲೆಟ್‌ನಲ್ಲಿ ಜಾಲಿ ರೈಡ್‌ ಮಾಡುವಾಗ ಅಪಘಾತ : ಓರ್ವ ಯುವತಿ ಸಾವು, ಇನ್ನೋರ್ವ ಗಂಭೀರ

ಹೆಲ್ಮೆಟ್‌ ಧರಿಸದೆ ಬೈಕ್‌ ಚಲಾಯಿಸುವಾಗ ಹಂಪ್‌ನಲ್ಲಿ ಪಲ್ಟಿ

ಬೆಂಗಳೂರು : ಬುಲೆಟ್ ಬೈಕ್‌ನಲ್ಲಿ ಸ್ನೇಹಿತೆಯರಿಬ್ಬರು ಜಾಲಿ ರೈಡ್‌ ಮಾಡುವಾಗ ಅಪಘಾತ ಸಂಭವಿಸಿದ ಓರ್ವ ಯುವತಿ ಮೃತಪಟ್ಟು ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ಸಂಭವಿಸಿದೆ.

ಬೈಕ್‌ ವೇಗವಾಗಿ ಚಲಾಯಿಸುವಾಗ ಹಂಪ್ಸ್ ಕಾಣದೆ ಬೈಕ್‌ ಪಲ್ಟಿಯಾಗಿ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಈ ಅಪಘಾತ ನಡೆದಿದ್ದು, ಇಬ್ಬರೂ ಹೆಲ್ಮೆಟ್‌ ಧರಿಸಿರಲಿಲ್ಲ ಎನ್ನಲಾಗಿದೆ.





















































 
 

ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಮತ್ತೋರ್ವ ಯುವತಿ ಸ್ವಾತಿ (24) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಫೈನಲ್ ಇಯರ್ ಓದುತ್ತಿದ್ದಳು, ಸ್ವಾತಿಗೆ ಕಳೆದ ನವೆಂಬರ್‌ನಲ್ಲಿ ಮದುವೆಯಾಗಿತ್ತು ಎಂದು ತಿಳಿದುಬಂದಿದೆ.

ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್‌ನಲ್ಲಿ ಜಾಲಿ ರೈಡ್‌ಗೆ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೆ ಇಬ್ಬರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದು, ಇನ್ನೋರ್ವಳ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ವಾತಿಯನ್ನು ಬೆಂಗಳೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ.

error: Content is protected !!
Scroll to Top