ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌

ದೂರು ನೀಡಿದ ಎರಡು ತಿಂಗಳ ಬಳಿಕ ಎಫ್‌ಐಆರ್‌ ದಾಖಲು

ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆದರಿಕೆ ಹಾಗೂ ಪ್ರೊ.ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.





















































 
 

ಪವಿತ್ರಾ ಅವರ ಪತಿ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ಮರುತನಿಖೆಗೆ ಆಗ್ರಹಿಸಿದ್ದ ಸ್ನೇಹಮಯಿ ಕೃಷ್ಣ, ಮೈಲಾರಪ್ಪ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಪವಿತ್ರಾ ಅವರಿಗೆ ತಾಕೀತು ಮಾಡಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ, ಸ್ನೇಹಮಯಿ ಕೃಷ್ಣ ಅವರು 2025ರ ಡಿಸೆಂಬರ್ 5ರಂದು ಪವಿತ್ರಾ ಅವರ ಮನೆ ವಿಳಾಸಕ್ಕೆ ಪತ್ರವೊಂದನ್ನು ಬರೆದಿದ್ದರು. ಈ ಪತ್ರದ ಮೂಲಕ ಒತ್ತಡ ಹೇರಿದ್ದರಿಂದ ತಮ್ಮ ನೆಮ್ಮದಿ ಹಾಳಾಗಿದೆ ಎಂದು ಪವಿತ್ರಾ ದೂರು ನೀಡಿದ್ದಾರೆ.

ಈ ಹಿಂದೆ ಬಸವೇಶ್ವರ ನಗರ ಪೊಲೀಸರು ಈ ಸಂಬಂಧ ಎನ್‌ಸಿಆರ್ ದಾಖಲಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿಯ ಮೇರೆಗೆ ಸ್ನೇಹಮಯಿ ಕೃಷ್ಣ ಮತ್ತು ಮೈಲಾರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪವಿತ್ರಾ ನೀಡಿದ ದೂರಿನ ಎರಡು ತಿಂಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ

error: Content is protected !!
Scroll to Top