ದಾವಣಗೆರೆ: ಇಂಜೆಕ್ಷನ್ ಓವರ್ಡೋಸ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಸಿದ್ಧಾರ್ಥ ತ್ರಯಂಬಕೆ(30) ಮೃತಪಟ್ಟ ವಿದ್ಯಾರ್ಥಿ.
ಸಿದ್ಧಾರ್ಥ ಅವರು ದಾವಣಗೆರೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮರೋಗ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದರು. ಅವರು ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿದೆ.
ಸಿದ್ದಾರ್ಥ ಅವರ ಕೋಣೆ ಲಾಕ್ ಆಗಿದ್ದ ಕಾರಣ ಸಂದೇಹದಿಂದ ಇತರ ವಿದ್ಯಾರ್ಥಿಗಳು ಬಾಗಿಲು ಒಡೆದು ಪರಿಶೀಲನೆ ಮಾಡಿದ್ದಾರೆ. ಆಗ ಈ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಏನು? ಎಂದು ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
























