ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರೇ ಎಡವಟ್ಟು ಮಾಡಿದ್ದಾರೆ ಎಂದು ಆರೋಪಿಗಳ ಪರ ವಕೀಲರು ಆರೋಪಿಸಿದ್ದಾರೆ.
ಸದ್ಯ ಆರೋಪಿಗಳು ದಿನಕ್ಕೊಂದು ಎಂಬಂತೆ ಹೊಸ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ. ನ್ಯಾಯಾಲಯಕ್ಕೆ ನಿನ್ನೆಯೂ ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದು, ಪೊಲೀಸರು ನಮ್ಮ ಮೊಬೈಲ್ ಗಳನ್ನು ಯಾವುದೋ ಸ್ಥಳದಲ್ಲಿ ವಶಕ್ಕೆ ಪಡೆದು ಬಳಿಕ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಆರೋಪಿಗಳನ್ನು ಟೈಲ್ಸ್ ಇರುವಂತಹ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯಲಾಗಿತ್ತಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಶುರುವಾಗಿದೆ. ಈ ಕುರಿತ ಅರ್ಜಿಯನ್ನು ಸ್ವೀಕಾರ ಮಾಡಿರುವ ನ್ಯಾಯಾಲಯ ವಿಚಾರಣೆ ನಿಗದಿ ಮಾಡಿದೆ.
























