ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

ಹಾಸನ: ಹಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಮೃತಪಟ್ಚ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ಹನುಮನಹಳ್ಳಿ ನಿವಾಸಿ ಶೃತಿ ಎಂಬವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ಭಾನುವಾರ ಮಗು ಜನಿಸಿದೆ. ಆದರೆ ಆ ಬಳಿಕ ಅವರ ಆರೋಗ್ಯ ಕ್ಷೀಣಿಸಲು ಆರಂಭವಾಗಿದೆ. ಆದರೆ ಭಾನುವಾರವಾದ ಕಾರಣ ತಜ್ಞ ವೈದ್ಯರು ಅಲಭ್ಯರಾದ ಕಾರಣ ಚಿಕಿತ್ಸೆ ವಿಳಂಬವಾಗಿ ಅವರು ಸಾವನ್ನಪ್ಪಿದ್ದಾರೆ.

ಮೊದಲಿಗೆ ಶೃತಿ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿ, ಆ ಬಳಿಕ ಅವರಿಗೆ ತೀವ್ರವಾಗಿ ಆರೋಗ್ಯ ಕ್ಷೀಣಿಸಿದೆ. ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಕುಟುಂಬದವರಿಗೆ ಆಸ್ಪತ್ರೆಯವರು ತಿಳಿಸಿದ್ದಾರೆ. ಆದರೆ ಅವರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸುವ ದಾರಿಯ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.





















































 
 

ಹಾಸನ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top