ಪುತ್ತೂರು: ಪತಿಯಿಂದ ಹಲ್ಲೆಗೊಳಗಾದ ಮಹಿಳೆಯೊಬ್ಬರು ಪುತ್ತೂರಿನ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಸಂತ್ರಸ್ತ ಮಹಿಳೆ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿದ್ದು, ಘಟನೆಗೆ ಸಂಬಂಧಿಸಿದ ಹಾಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ಹದಿನಾರು ವರ್ಷಗಳ ಹಿಂದೆ ಮನೋಜ್ ಎಂಬವರ ಜೊತೆಗೆ ನನ್ನ ವಿವಾಹವಾಗಿದೆ. ಒಂಬತ್ತನೇ ತರಗತಿಯ ಮಗನೂ ಇದ್ದಾನೆ. ಗಂಡ ನನಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಫೆ. 25 ರಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
























