ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಇಬ್ರಾಹಿಂ ಬಾತಿಸ್ ಪೊಲೀಸ್ ಬಲೆಗೆ

ವಿಟ್ಲ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಿಮಾನ ನಿಲ್ದಾಣದಲ್ಲೇ ಬಂಧಿಸಿದ್ದಾರೆ.

ಆರೋಪಿಯನ್ನು ಕನ್ಯಾನ ನಿವಾಸಿ ಇಬ್ರಾಹಿಂ ಬಾತಿಸ್ ಎಂದು ಗುರುತಿಸಲಾಗಿದೆ.

ಐಪಿಸಿ ಕಲಂ 427, 504, 394, 341 ಹಾಗೂ 2(A) Prevention of Destruction and Loss of Property Act ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಈತ ವಿದೇಶದಿಂದ ಮರಳಿ ಬರುವಾಗ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.





















































 
 

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

error: Content is protected !!
Scroll to Top