ಇಸ್ರೇಲಿನಲ್ಲಿ ಉಗ್ರವಾದದ ‌ವಿರುದ್ಧ ಗುಡುಗಿದ ಪ್ರಧಾನಿ ಮೋದಿ

ನವದೆಹಲಿ: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಲ್ಲಿನ ಸಂಸತ್ತಿನಲ್ಲಿ ಮಾತನಾಡಿದ್ದು, ಭಾರತ ಭಯೋತ್ಪಾದನೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ನಾನು ಭಾರತದ ಪ್ರಧಾನಿಯಾಗಿ ಮತ್ತು ಒಂದು ಪ್ರಾಚೀನ ನಾಗರೀಕತೆಯ ಪ್ರತಿನಿಧಿಯಾಗಿ ಮತ್ತೊಂದು ನಾಗರೀಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಭಾರತ ಉಗ್ರವಾದವನ್ನು ಎಂದಿಗೂ ಸಹಿಸಲಾರದು. ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಉಗ್ರವಾದ ಬಹುದೊಡ್ಡ ಸವಾಲಾಗಿದೆ. ಇದು ಮಾನವೀಯತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಉಗ್ರಗಾಮಿತ್ವವನ್ನು ಒಪ್ಪಲು ಯಾರಿಂದಲೂ ‌ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಆ. 7ರಂದು ಹಮಾಸ್ ನಡೆಸಿದ ಬರ್ಬರ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಪ್ರತಿಯೊಬ್ಬರಿಗೂ ಭಾರತೀಯರ ಪರವಾಗಿ ನಾನು ಸಂತಾಪವನ್ನು ಸೂಚಿಸುತ್ತೇನೆ. ನಿಮ್ಮ ನೋವು, ನಿಮ್ಮ ದುಃಖವನ್ನು ನಾವು ಹಂಚಿಕೊಳ್ಳುತ್ತೇವೆ. ಭಾರತವು ಸದಾ ಇಸ್ರೇಲ್‌ನೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ.





















































 
 

ಈ ಪ್ರದೇಶದಲ್ಲಿ ನ್ಯಾಯಯುತ ಮತ್ತು ಶಾಶ್ವತ ಶಾಂತಿಯ ಭರವಸೆಯನ್ನು ಹೊಂದಿದೆ. ಶಾಂತಿಯ ಹಾದಿ ಯಾವಾಗಲೂ ಸುಲಭವಲ್ಲ. ಈ ಪ್ರದೇಶದಲ್ಲಿ ಸಂವಾದ, ಶಾಂತಿ ಮತ್ತು ಸ್ಥಿರತೆಗಾಗಿ ಭಾರತವು ನಿಮ್ಮೊಂದಿಗೆ ಮತ್ತು ಜಗತ್ತಿನೊಂದಿಗೆ ಸದಾ ನಿಲ್ಲುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

error: Content is protected !!
Scroll to Top