ನಾಳೆ ಚಂದ್ರ ಗ್ರಹಣ : ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ

ಧರ್ಮಸ್ಥಳ: ಮಂಗಳವಾರ ಚಂದ್ರ ಗ್ರಹಣ ಸಂಭವಿಸುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಸೇರಿದಂತೆ ಕರಾವಳಿಯ ಕೆಲವು ಪ್ರಮುಖ ದೇವಸ್ಥಾನಗಳಲ್ಲಿ ದೇವರ ದರ್ಶನ ಮತ್ತು ಪೂಜೆಯ ಸಮಯದಲ್ಲಿ ತುಸು ಬದಲಾವಣೆ ಮಾಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಮತ್ತು ಅನ್ನಪ್ರಸಾದದ ಸಮಯದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಈ ಕುರಿತು ದೇವಸ್ಥಾನದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ನಾಳೆ ಮಧ್ಯಾಹ್ನ 1.30 ಗಂಟೆಗೆ ದೇವಸ್ಥಾನದ ಬಾಗಿಲನ್ನು ಹಾಕಲಾಗುವುದು. ಬೆಳಗಿನ ಪೂಜೆಗಳೆಲ್ಲವೂ 1.30ರ ಒಳಗಾಗಿ ಮುಕ್ತಾಯಗೊಳ್ಳಲಿವೆ.

ಮಧ್ಯಾಹ್ನ ದೇವಸ್ಥಾನ ಬಂದ್ ಆದ ನಂತರವೂ ಮಧ್ಯಾಹ್ನ 2 ಗಂಟೆಯವರೆಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ. ಗ್ರಹಣ ಮುಕ್ತಾಯದ ನಂತರ, ಅಂದರೆ ಸಂಜೆ 7 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ. ಗರ್ಭಗುಡಿಯ ಶುದ್ಧೀಕರಣ ಮತ್ತು ಅಭಿಷೇಕದ ನಂತರ, ರಾತ್ರಿ 7.30ರ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಮುಕ್ತ ಅವಕಾಶವಿರುತ್ತದೆ. ದೇವರ ದರ್ಶನ ಆರಂಭವಾದ ಬಳಿಕ ಎಂದಿನಂತೆ ರಾತ್ರಿಯ ಅನ್ನಪ್ರಸಾದ ವಿತರಣೆಯೂ ಪ್ರಾರಂಭವಾಗಲಿದೆ.





















































 
 
error: Content is protected !!
Scroll to Top