ಪುತ್ತೂರು: ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಯುವಕ ಸಾವಿಗೀಡಾದ ಘಟನೆ ಮಂಗಳವಾರ ರಾತ್ರಿ ಕುಂಬ್ರ-ಬೆಳ್ಳಾರೆ ರಸ್ತೆಯಲ್ಲಿ ಸಂಭವಿಸಿದೆ. ಕುಂಬ್ರ ಶಾಲೆಯ ಬಳಿಯ ನಿವಾಸಿ ಭುವನ್ (33) ಮೃತಪಟ್ಟಿರುವ ಯುವಕ.
ನಿಂತಿಕಲ್ಲಿನ ಬಾರ್ ಒಂದರಲ್ಲಿ ಉದ್ಯೋಗಿಯಾಗಿರುವ ಭುವನ್ ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದರು. ಕೆಯ್ಯೂರು ಕಡೆಗೆ ಹೋಗಿ ರಾತ್ರಿ ಮನೆಗೆ ಬರುತ್ತಿದ್ದಾಗ ಅವರ ಬೈಕ್ ಅಪಘಾತಕ್ಕೀಡಾಗಿದೆ. ಬೈಕ್ ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಭುವನ್ ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























