ಪಿಸ್ತೂಲು ತೋರಿಸಿ ಬೆದರಿಕೆಯೊಡ್ಡಿದ ಯುವಕ ಸೆರೆ

ಕಾರು ಚಾಲಕನನ್ನು ಅಡ್ಡಗಟ್ಟಿ ಪಿಸ್ತೂಲು ತೋರಿಸಿ ಬೆದರಿಸಿದ್ದ ಯುವಕ

ಪುತ್ತೂರು: ಪುತ್ತೂರಿನ ರಿಲಯನ್ಸ್ ಮಾಲ್ ಬಳಿ ಕಾರು ಚಾಲಕರೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ, ಗುಂಡು ಹಾರಿಸಲು ಯತ್ನಿಸಿದ 19 ವರ್ಷದ ಯುವಕನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ನಿವಾಸಿ ಮಹಮ್ಮದ್ ಶಫೀಕ್‌ ಎಂದು ಗುರುತಿಸಲಾಗಿದೆ.

ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಎಂಬವರು ನೀಡಿದ ದೂರಿನ ಪ್ರಕಾರ, ಮಾರ್ಚ್ 2ರ ಮಧ್ಯಾಹ್ನ ಹಕೀಂ ಪುತ್ತೂರಿನಿಂದ ಕೂರ್ನಡ್ಕಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ, ಹೆಲ್ಮೆಟ್ ಧರಿಸದ ಯುವಕ ರಿಲಯನ್ಸ್ ಮಾಲ್ ಬಳಿ ಅವರ ಕಾರನ್ನು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಪ್ರಯತ್ನಿಸಿ ಬೆದರಿಸಿದ್ದಾನೆ. ಈ ವೇಳೆ ಹಕೀಂ ಮತ್ತು ಅಲ್ಲಿದ್ದ ಸಾರ್ವಜನಿಕರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ ಆರೋಪಿ ತನ್ನ ಮೋಟಾರ್ ಸೈಕಲ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದ.





















































 
 

ದೂರಿನ ಅನ್ವಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬರ್: 26/2026, ಕಲಂ: 351(3) BNS 2023 ಮತ್ತು ಕಲಂ: 3, 25, 27 ಶಸ್ತ್ರಾಸ್ತ್ರ ಕಾಯ್ದೆ 1959 ಯಡಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಸಿದ ಪೊಲೀಸರು ಮಹಮ್ಮದ್ ಶಫೀಕ್‌‌ನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಈತನಿಗೆ ಪಿಸ್ತೂಲ್ ಎಲ್ಲಿಂದ ಸಿಕ್ಕಿತು ಮತ್ತು ಬೆದರಿಕೆ ಹಾಕಲು ಕಾರಣವೇನು ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ಮುಗಿದ ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top