ಮಾ.7 – 8: ಒಕ್ಕಲಿಗ ಪ್ರೀಮಿಯರ್ ಲೀಗ್ (ವಿಪಿಎಲ್) 2026 ಸೀಸನ್- 3

ಮಂಗಳೂರು: ಯುವ ಘಟಕ – ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ( ರಿ.) ಮಂಗಳೂರು ಇದರ ವತಿಯಿಂದ ಒಕ್ಕಲಿಗ ಪ್ರೀಮಿಯರ್ ಲೀಗ್ (ವಿಪಿಎಲ್) 2026 ಸೀಸನ್-3 ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂತರ್ ಜಿಲ್ಲಾ ಕ್ರಿಕೆಟ್ ಮತ್ತು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ಮಾ‌ 7 ಮತ್ತು 8 ರಂದು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಪಂದ್ಯಾಟವು ಬೆಳಿಗ್ಗೆ 7.30 ಪ್ರಾರಂಭಗೊಳ್ಳಲಿದ್ದು, ಉದ್ಘಾಟನಾ ಸಮಾರಂಭ ಮಾ. 7ರ ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ. ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಮಾ. 8 ರಂದು ಶನಿವಾರ ಸಂಜೆ 7.00 ಗಂಟೆಗೆ ನೆರವೇರಲಿದೆ.

ಈ ಸಮಾರಂಭದಲ್ಲಿ ಅನೇಕ ಗಣ್ಯರು, ಅತಿಥಿಗಳು ಭಾಗವಹಿಸಲಿದ್ದಾರೆ.





















































 
 

ಒಕ್ಕಲಿಗರ ಪ್ರೀಮಿಯರ್ ಲೀಗ್ 2026 ಮಂಗಳೂರು ಇದರ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಒಕ್ಕಲಿಗ ಸಮುದಾಯದ 12 ಮಾಲಕತ್ವದ ತಂಡಗಳು ಭಾಗವಹಿಸಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

error: Content is protected !!
Scroll to Top