ಉಪ್ಪಿನಂಗಡಿ: ನ್ಯಾಯಾಲಯಕ್ಕೆ ರಾಜನಾದ ಬಳಿಕ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಲ್ಲಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಕಡಬದ ವಿನೋದ್ ಯಾನೆ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂದು ಗುರುತಿಸಲಾಗಿದೆ.
ಆರೋಪಿ ವಿನೋದ್‌ನ ಮೇಲೆ 2019 ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಜೀವ ಬೆದರಿಕೆ ಮೊದಲಾದ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ದಾಖಲಾದ ಬಳಿಕ ಆತ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಸದ್ಯ ಉಪ್ಪಿನ ಗಡಿ ಪೊಲೀಸರು ಮಾರ್ಚ್ 5 ರಂದು ಆರೋಪಿಯನ್ನು ಕೇರಳದ ತ್ರಿಶ್ಯೂರ್‌ನ ಇರಿಂಜಲಕುಡ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
























